Sunday, August 16, 2026

BDA Apartments

Home Front Page ಸಿಎಂ ಆಗಲು ಕೆಲವರು ಸೂಟ್ ಹೊಲಿಸಿಕೊಂಡು ರೆಡಿಯಾಗಿದ್ದಾರೆ ಎಂದು ಎಚ್ಡಿಕೆ ಟೀಕಿಸಿದ್ದು ಯಾರಿಗೆ!?

ಸಿಎಂ ಆಗಲು ಕೆಲವರು ಸೂಟ್ ಹೊಲಿಸಿಕೊಂಡು ರೆಡಿಯಾಗಿದ್ದಾರೆ ಎಂದು ಎಚ್ಡಿಕೆ ಟೀಕಿಸಿದ್ದು ಯಾರಿಗೆ!?

ಬೆಂಗಳೂರು, ಜೂನ್ 19, 2021 (www.justkannada.in): ಮುಖ್ಯಮಂತ್ರಿ ಆಗುವುದಕ್ಕೆ ಕೆಲವರು ಸೂಟ್ ಹೊಲಿಸಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ,ಕಾಂಗ್ರೆಸ್‌ನಲ್ಲೂ ಕೆಲವರು ಸಿಎಂ ಆಗಲು ಸೂಟ್ ಹೊಲಿಸಿಕೊಂಡು ರೆಡಿ ಇದ್ದಾರೆ ಎಂದು ಟೀಕಿಸಿದ್ದಾರೆ.

ಕೊರೊನಾ ಸೋಂಕಿನ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕೋವಿಡ್ ವಿಚಾರವಾಗಿ ಕಲಾಪ ಕರೆಯಬೇಕು. ಬಿಜೆಪಿ ಪಕ್ಷದ ಶಾಸಕರಲ್ಲೇ ಹೊಂದಾಣಿಕೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ದಂಗೆ ನಡೆಸುವ ಕಾಲವಲ್ಲ ಇದಲ್ಲ. ಜನರು ಕಷ್ಟದಲ್ಲಿ ಇದ್ದಾರೆ. ಸರ್ಕಾರ ತನ್ನ ಅಸ್ಥಿರತೆ ತೋರಿಸುತ್ತ ಕುಳಿತುಕೊಂಡರೆ ಜನ ಏನು ಮಾಡಬೇಕು ಎಂದಿದ್ದಾರೆ ಮಾಜಿ ಸಿಎಂ ಎಚ್‍ಡಿಕೆ.