Wednesday, July 29, 2026

BDA Apartments

Home Front Page ಅಧಿಕಾರವಿಲ್ಲದೇ ಎಚ್ಡಿಕೆ ಮಾನಸಿಕ ಸ್ಥಿಮೀತ ಕಳೆದುಕೊಂಡಿದ್ದಾರೆ: ನಳಿನ್ ಕುಮಾರ್

ಅಧಿಕಾರವಿಲ್ಲದೇ ಎಚ್ಡಿಕೆ ಮಾನಸಿಕ ಸ್ಥಿಮೀತ ಕಳೆದುಕೊಂಡಿದ್ದಾರೆ: ನಳಿನ್ ಕುಮಾರ್

ಬೆಂಗಳೂರು, eಜನವರಿ 26, 2019 (www.justkannada.in): ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಪ್ರಚಾರಕ್ಕೋಸ್ಕರ ಮನಬಂದಂತೆ ಮಾತನಾಡುತ್ತಿದ್ದಾರೆ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಡೆಯಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಅವರು ಕೀಳುಮಟ್ಟದ ಮಾತುಗಳನ್ನಾಡುವುದು ಅವರಿಗೆ ಶೋಭೆ ತರುವಂತಹುದಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ. ಆದರೆ, ಗೊಂದಲವನ್ನು ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ನಾವಿಕನೇ ಇಲ್ಲ. ಮೂರು ತಿಂಗಳಾದರೂ ಅಧ್ಯಕ್ಷರನ್ನು ಮಾಡಲು ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.