ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಆಕ್ರೋಶ: ಟ್ವಿಟ್ ಮಾಡಿ ಜನಾಂದೋಲನದ ಎಚ್ಚರಿಕೆ ಕೊಟ್ಟ ಹೆಚ್.ಡಿಕೆ.

ಬೆಂಗಳೂರು,ಜೂನ್,28,2022(www.justkannada.in): ವಿದ್ಯುತ್ ದರ ಏರಿಕೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ‍್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿರುವ ಹೆಚ್.ಡಿ ಕುಮಾರಸ್ವಾಮಿ, ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರಕ್ಕೆ ಕುಟುಕಿದ್ದಾರೆ.

ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ?

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದು ಹೆಚ್.ಡಿಕೆ ಕಿಡಿಕಾರಿದ್ದಾರೆ.

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು & ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಹೆಚ್.ಡಿಕೆ ಎಚ್ಚರಿಕೆ ನೀಡಿದ್ದಾರೆ.

Key words: HDK-Outrage-against-government -hike –electricity-bill

ENGLISH SUMMARY…

Outrage against govt. over hike in electricity rates: HDK warns govt. to take out a protest
Bengaluru, June 28, 2022 (www.justkannada.in): Former Chief Minister H.D. Kumaraswamy has expressed his ire against the State Government for increasing the electricity rates and has warned of organizing a massive protest.
In a series of tweets, the former Chief Minister mentioned that the BJP has set an all-time record concerning price hike. “They had given the people a shock by increasing the prices on April 1. Now, again they are all set to give them another shock by increasing the power fares from July 1. All the reservoirs in the State are full following good rainfall. The power production is also good. The government itself informed that it has additional power to supply. Then what is the reason to increase the prices?,” he has questioned.
“People who consume more than 100 units of power per month should pay extra. What does it mean? should the poor and middle class people stop using electricity and live in darkness? Is it what BJP means making the lives of people bright through ‘Gati Shakti,? The people are aware about the incapability of the BJP government in managing the Energy Department. They have already burdened the people through fuel hike, now they are planning to loot them further by increasing the prices of electricity,” his tweet read.
“BJP means price hike, price hike means BJP. It supports only the strong and business class people. But it fleeces the blood of poor and middle class people. Assembly elections in the State are nearing. They have planned to increase the price now and decrease a little by election time. This is just a stunt. Is this what they call as a new idea of managing expenses?,” he has questioned.
He has also demanded the government not to increase the prices of electricity at any cost. While the government couldn’t provide hurdle-free power supply to rural areas, what rights does it have to increase the prices? If the price of electric supply is increased a massive protest will be taken out, “he has warned.
Keywords: Electricity/ price hike/ H.D. Kumaraswamy/ protest