ನವದೆಹಲಿ,ಅಕ್ಟೋಬರ್,17,2025 (www.justkannada.in): 2011ರ ಅಕ್ರಮ ಗಣಿಗಾರಿಕೆ ಸಂಬಂಧ ತನಿಖೆ ನಡೆಸುತ್ತಿದ್ದ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2011ರ ಅಕ್ರಮ ಗಣಿಗಾರಿಕೆ ಸಂಬಂಧ ಎಡಿಜಿಪಿ ಚಂದ್ರ ಶೇಖರ್ ಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು.
ಹೆಚ್ ಡಿಕೆ ವಿರುದ್ದ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಎಫ್ ಐಆರ್ ಮೇಲಿನ ತನಿಖೆಗೆ ಈ ಹಿಂದೆಯೂ ಸುಪ್ರೀಂಕೋರ್ಟ್ ತಡೆ ನೀಡಿತ್ತು. ಸುಪ್ರೀಂ ಕೋರ್ಟ್ ಇಂದಿನ ವಿಚಾರಣೆಯಲ್ಲೂ ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ.
ಹಾಗೆಯೇ ಇಂತಹ ಪ್ರಕರಣವನ್ನ ರಾಜಕೀಯ ವೇದಿಕೆಯಾಗಿ ಮಾಡಿಕೊಳ್ಳಬೇಡಿ ಈ ಹಿಂದೆಯೂ ಇಂತಹದ್ದೇ ಅರ್ಜಿ ವಜಾ ಮಾಡಲಾಗಿತ್ತು ಮತ್ತೆ ಯಾಕೆ ಅರ್ಜಿ ಸಲ್ಲಿಸಿದ್ದೀರಿ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿತು. ಇದಕ್ಕೆ ಉತ್ತರಿಸಲು ಬಂದ ರಾಜ್ಯ ಸರ್ಕಾರದ ವಾದವನ್ನು ಸಿಜೆಐ ತಿರಸ್ಕರಿಸಿದರು.
Key words: Big relief, Union Minister, HDK, Supreme Court, state government