ಎಸ್ ಎಲ್ ಭೈರಪ್ಪ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ-ಕೇಂದ್ರ ಸಚಿವ ಹೆಚ್ ಡಿಕೆ ಸಂತಾಪ

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಸಾಹಿತಿ ಎಸ್ ಎಲ್ ಭೈರಪ್ಪ ಅವರ  ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿಕೆ,  ‘ಪರ್ವ’ ಮತ್ತು ‘ಉತ್ತರಕಾಂಡ’ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.

ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ ‘ಅಮರ ಪ್ರತಿಭೆ’ ಎಂಬ ಹೆಮ್ಮೆ ನನ್ನದು. ಅವರ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.

ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Key words: Union Minister, HDK, Condolences, Writer, SL Bhyrappa