ಬೆಂಗಳೂರಿನಲ್ಲಿ ಕೊರೋನಾಗೆ ಹೆಡ್ ಕಾನ್ಸ್ ಟೇಬಲ್ ಬಲಿ…

ಬೆಂಗಳೂರು,ಜೂ,20,2020(www.justkananda.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇದೀಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಕಲಾಸಿ ಪಾಳ್ಯ ಪೊಲೀಸ್ ಠಾಣೆಯ 55 ವರ್ಷದ ಹೆಡ್ ಕಾನ್ಸ್ ಟೇಬಲ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಮತ್ತೊಬ್ಬ ಕೊರೋನಾ ವಾರಿಯರ್ ಸಾವನ್ನಪ್ಪಿದ್ದಾರೆ. ಮೃತ ಹೆಡ್ ಕಾನ್ಸ್ ಟೇಬಲ್ ಗೆ ಮೂರು ದಿನಗಳ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.head-constable-death-corona-bangalore

ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ.  ಬೆಂಗಳೂರಿನಲ್ಲಿ ಕೊರೋನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಇತ್ತೀಚೆಗಷ್ಟೇ  ನಗರದ ವಿವಿಪುರಂ ಪೊಲೀಸ್ ಠಾಣೆಯ ಎಎಸ್ ಐ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದರು.

Key words: Head Constable –death- Corona -Bangalore.