Wednesday, September 9, 2026

BDA Apartments

Home Crime ವಿದ್ಯಾರ್ಥಿ ಮೇಲೆ ಕಾಲಿನಿಂದ ಒದ್ದು ಹಲ್ಲೆ ನಡೆಸಿ ವಿಕೃತಿ ಮೆರೆದ ಮುಖ್ಯ ಶಿಕ್ಷಕ

ವಿದ್ಯಾರ್ಥಿ ಮೇಲೆ ಕಾಲಿನಿಂದ ಒದ್ದು ಹಲ್ಲೆ ನಡೆಸಿ ವಿಕೃತಿ ಮೆರೆದ ಮುಖ್ಯ ಶಿಕ್ಷಕ

ಚಿತ್ರದುರ್ಗ,ಅಕ್ಟೋಬರ್,21,2025 (www.justkannada.in): ತನ್ನ ಅಜ್ಜಿಗೆ ಫೋನ್ ಮಾಡಿದ್ದಕ್ಕೆ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿಯ  ಮೇಲೆ  ಹಲ್ಲೆ ನಡೆಸಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ  ವೀರೇಶ್ ಹಿರೇಮಠ ಹಲ್ಲೆ ಮಾಡಿ ದೌರ್ಜನ್ಯ ಮೆರೆದಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದು,  ಕಾಲಿನಲ್ಲಿ ಒದ್ದು  ವಿಕೃತಿ ಮೆರೆದಿದ್ದು,  ಶಿಕ್ಷಕ ವಿರೇಶ ಹಿರೇಮಠ್ ಕ್ರೌರ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪುಟ್ಟ ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಖ್ಯ ಶಿಕ್ಷಕನ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದು,  ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Head teacher,  kicking, assaulting, student