ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯಶಿಕ್ಷಕ ಸಸ್ಪೆಂಡ್.

ಮಂಡ್ಯ,ಡಿಸೆಂಬರ್,17,2022(www.justkannada.in): ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕಟ್ಟೇರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನ ಅಮಾನತು ಮಾಡಲಾಗಿದೆ.

ಚಿನ್ಮಯಾನಂದಮೂರ್ತಿ ಅಮಾನತುಗೊಂಡ ಪ್ರೌಡಶಾಲಾ ಮುಖ್ಯಶಿಕ್ಷಕ. ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ನಿಲಯದ ಉಸ್ತುವಾರಿ ಹೊತ್ತಿದ್ದ ಮುಖ್ಯಶಿಕ್ಷಕ ಚಿನ್ಮಯಾನಂದ ಮೂರ್ತಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು.

ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ  ಮುಖ್ಯ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ. ಜವರೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಖ್ಯ ಶಿಕ್ಷಕನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಇದೀಗ ಮುಖ್ಯ ಶಿಕ್ಷಕ ಚಿನ್ಮಯಾನಂದ ಮೂರ್ತಿಯನ್ನ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Key words:  headmaster -suspended – misbehaving – children