ಮೈಸೂರು,ಫೆಬ್ರವರಿ,21,2026 (www.justkannada.in): ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದಿಂದ ಈಗಾಗಲೇ ಯಶಸ್ವಿನಿ ವಿಮೆ ಪಡೆದಿರುವ ಸದಸ್ಯರಿಗಾಗಿ ನವೀಕರಣ ಮತ್ತು ಹೊಸದಾಗಿ ವಿಮೆ ಪಡೆಯಲು ಬಯಸಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
2025- 26ನೇ ಸಾಲಿನಲ್ಲಿ ಸದರಿ ಯೋಜನೆಯಡಿ ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಗರಿಷ್ಠ ನಾಲ್ಕು ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ. 1000 ರೂ. ವಂತಿಕೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಶೇ. 20 ರಷ್ಟು ಹೆಚ್ಚುವರಿಯಾಗಿ ಅಂದರೆ ಪ್ರತಿ ಹೆಚ್ಚುವರಿ ಸದಸ್ಯರಿಗೆ ರೂ. 200 ರೂ. ಪಾವತಿಸತಕ್ಕದ್ದು. ಪರಿಶಿಷ್ಟ ಜಾತಿ/ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವ ವಂತಿಕೆಯನ್ನು ಸರ್ಕಾರವೇ ಭರಿಸುತ್ತದೆ.
ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ಸದಸ್ಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸಂಘದ ಕಚೇರಿಯಲ್ಲಿ ದೊರಕುವ ಅರ್ಜಿ ನಮೂನೆಯನ್ನು. ಪಡೆದು, ಅಗತ್ಯ ದಾಖಲೆಗಳು ಮತ್ತು ಶುಲ್ಕದೊಂದಿಗೆ ಮಾರ್ಚ್ 5 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮೊಬೈಲ್ ದೂರವಾಣಿ ಸಂಖ್ಯೆ : 9741511340, 91 91081 74008 ಸಂಪರ್ಕಿಸುವಂತೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ತಿಳಿಸಿದ್ದಾರೆ.
Key words: Yashaswini, Health Insurance, Journalists, Apply







