ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ,ಡಿಸೆಂಬರ್,20,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ  ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ(58)  ಮತ್ತು ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್(35) ಹೃದಯಾಘಾತಕ್ಕೆ ಬಲಿಯಾದವರು.

ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪರಮೇಶ್ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Key words: Two die, heart attack, Hassan, district