ಲೋ ಬಿಪಿಯಿಂದ ಹೃದಯಾಘಾತ: ನರ್ಸಿಂಗ್ ವಿದ್ಯಾರ್ಥಿನಿ ಸಾವು.

ದಕ್ಷಿಣ ಕನ್ನಡ,ಆಗಸ್ಟ್,14,2023(www.justkannada.in):  ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದರು. ಆನಾರೋಗ್ಯ ಹಿನ್ನೆಲೆ ಆಗಸ್ಟ್ 9 ರಂದು ಸುಮಾ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು.

ನಂತರ ಮತ್ತೆ ಆಗಸ್ಟ್.11 ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಆಗಸ್ಟ್ 13 ರ ಸಂಜೆ ಸುಮಾ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Key words: Heart attack – low –BP- Nursing student- dies.