ಎದೆನೋವು, ಉಸಿರಾಟದ ತೊಂದರೆ: ಡಿಕೆ ಶಿವಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು, ನವೆಂಬರ್ 12, 2019 (www.justkannada.in):  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣದಿಂದ ಸೋಮವಾರ ತಡರಾತ್ರಿ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ 10 ದಿನಗಳ ಹಿಂದೆಯಷ್ಟೇ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಡಿಕೆಶಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿದ್ದಾರೆ.

ಕೆ.ಶಿವಕುಮಾರ್ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದ ಒತ್ತಡ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಅಪೋಲೋ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಡಿಕೆಶಿ ಅವರಿಗೆ ವೈದ್ಯರು ಕಡ್ಡಾಯ ವಿಶ್ರಾಂತಿ ಅಗತ್ಯವೆಂದು ಸಲಹೆ ನೀಡಿದ್ದಾರೆ. ಇನ್ನು ಮೂರು ದಿನಗಳ ಕಾಲ ಡಿಕೆಶಿ ಅವರ ಭೇಟಿಗೆ ಅವಕಾಶವಿಲ್ಲವೆಂದು ಕುಟುಂಬದ ಮೂಲಗಳು ತಿಳಿಸಿವೆ.