Saturday, September 19, 2026

BDA Apartments

ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ BDA JK_Adv BD...
Home Front Page ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು,ಜೂನ್,14,2025 (www.justkannada.in): ರಾಜ್ಯಾದ್ಯಂತ ಮುಂಗಾರು ಮಳೆ ಬಿರುಸುಗೊಂಡಿದ್ದು, ಇದೀಗ ಮತ್ತೆ ರಾಜ್ಯದ ಹಲವು ಭಾಗಳಲ್ಲಿ ಭಾರಿ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಆರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಧಾರವಾಡ, ಬೆಳಗಾವಿ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರಿಸಲಿದ್ದು, ಮುಂಜಾಗೃತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಜೂನ್ 17 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.vtu

Key words: Heavy rain, again , state, Red alert ,6 districts