ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ…

ಬೆಂಗಳೂರು,ಅಕ್ಟೋಬರ್,23,2020(www.justkannada.in):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.jk-logo-justkannada-logo

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಳೆಯಾಗುತ್ತಿದೆ.  ಇಂದಿರಾ ನಗರ, ರಾಜಾಜಿನಗರ, ಶಿವಾನಂದ ಸರ್ಕಲ್, ಯಶವಂತಪುರ, ಮಲ್ಲೇಶ್ವರಂ, ಜೆಪಿ ನಗರ, ಹಲಸೂರು ಗೇಟ್, ವಿಜಯನಗರ, ಜಯನಗರ, ಮೈಸೂರು ರಸ್ತೆ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಸುತ್ತ ಮುತ್ತ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.heavy-rain-bengaluru-two-days

ಇನ್ನು ಮಳೆಯಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 24ರಂದು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Key words: Heavy rain – Bengaluru – two- days.