ಭಾರಿ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವು.

ಉತ್ತರ ಕನ್ನಡ,ಆಗಸ್ಟ್,2,2022(www.justkannada.in):  ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾಮಳೆಗೆ ನಾಲ್ವರು ಬಲಿಯಾಗಿದ್ದಾರೆ.

ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ. ಲಕ್ಷ್ಮಿ ನಾರಾಯಣ ನಾಯ್ಕ, ಅನಂತ ನಾರಾಯಣ ನಾಯ್ಕ್, ಲಕ್ಷ್ಮಿ, ಪ್ರವೀಣ್ ಮೃತಪಟ್ಟವರು.

ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದಿದ್ದು,  ಮನೆ ಸಂಪೂರ್ಣ ನೆಲಸಮವಾಗಿದೆ. ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Key words: heavy rain- collapsed – house – four people- died-bhatkala