ಭಾರಿ ಮಳೆ ಹಿನ್ನೆಲೆ: ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಉತ್ತರ ಕನ್ನಡ ಜುಲೈ5,2022(www.justkannada.in): ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ಮಳೆ ಆರ್ಭಟ ಜೋರಾಗಿದ್ದು ಈ ಹಿನ್ನೆಲೆ ಜಿಲ್ಲೆಯ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಡಿಸಿ ಸೂಚನೆ ಮೇರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇನ್ನೂ 3 ದಿನ ಭಾರಿ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ದಿನವಿಡಿ ಸುರಿದ ಗಾಳಿ ಸಹಿತ ಭಾರಿ ಮಳೆಗೆ ಹೊನ್ನಾವರದಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿ 6 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ai

ಉತ್ತರಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಜು.8 ರವರೆಗೂ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜು.8 ರವರೆಗೆ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಭಾರೀ ಗಾಳಿ ಸಹಿತ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಿದೆ.

Key words: Heavy rain- Holiday -announcement – Uttara Kannada -district.