ಮಳೆಗೆ ತತ್ತರಿಸಿದ ಮುಂಬೈ ಮಹಾನಗರಿ: 25ಮಂದಿ ಸಾವು

ಬೆಂಗಳೂರು, ಜುಲೈ 18, 2021 (www.justkannada.in): ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಹುಲ್ ಪ್ರದೇಶದ ಭಾರತ್‌ ನಗರದಲ್ಲಿ ಭೂಕುಸಿತ ಸಂಭವಿಸಿದೆ.

ಹಲವು ಮನೆಗಳ ಗೋಡೆ ಕುಸಿದಿದ್ದು, ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌), ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾನುವಾರ ಮುಂಜಾನೆ 1 ಗಂಟೆ ಸುಮಾರಿಗೆ ಗೋಡೆ ಕುಸಿದಿದ್ದು, ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆರೆಯಂತಾಗಿರುವ ರಸ್ತೆಗಳು ಕಾರುಗಳು ಸೇರಿದಂತೆ ಹಲವು ವಾಹನಗಳು ತೇಲಿ ಹೋಗಿವೆ. ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಗಿದೆ.