ಮುಂದಿನ ಎರಡು ದಿನ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಜೂನ್ 18, 2023 (www.justkannada.in): ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಎರಡು ದಿನಗಳ ಕಾಲ ವಾಯುವ್ಯ ಭಾರತ ಮತ್ತು ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಮತ್ತು ಮಧ್ಯ ರಾಜಸ್ಥಾನ, ಮಣಿಪುರ, ಮೇಘಾಲಯ, ಅಸ್ಸಾಂ ಮತ್ತು ತ್ರಿಪುರಾದ ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದರ ಹೊರತಾಗಿ, ಒಳನಾಡು ಕರ್ನಾಟಕ, ಗೋವಾ, ಕೊಂಕಣ ಮತ್ತು ಪಶ್ಚಿಮ ಯುಪಿಯ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ, ಭಾರತದ ಅನೇಕ ರಾಜ್ಯಗಳಲ್ಲಿ ಋತುಮಾನದ ಚಲನೆ ಕಂಡುಬಂದಿದೆ. ಕಚ್ ಮತ್ತು ಸೌರಾಷ್ಟ್ರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.