ರಾಜ್ಯದ ಹಲವೆಡೆ ಅಧಿಕ ಮಳೆ -ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು,ಅಕ್ಟೋಬರ್,16,2023(www.justkannada.in):  ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗಲಿದೆ .ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಮುಸುಕಿದ ವಾತಾವರಣವಿರಲಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Key words: Heavy rain – many parts – state – Meteorological department