Thursday, August 20, 2026

BDA Apartments

Home Front Page ಮುಂದುವರಿದ ಮಳೆ ಆರ್ಭಟ: ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಮುಂದುವರಿದ ಮಳೆ ಆರ್ಭಟ: ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು, ಜುಲೈ 24, 2021 (www.justkannada.in): ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು ಬೀಳಲಿದ್ದು, 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕಂದಾಯ ಸಚಿವ ಆರ್.ಅಶೋಕ್ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ.

ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೊತೆಗೆ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಸಿದ್ದಾರೆ.