ಶಿವಮೊಗ್ಗದಲ್ಲೂ ಮುಂದುವರೆದ ಮಳೆರಾಯನ ಅಬ್ಬರ: ಶಾಲೆಗಳಿಗೆ ರಜೆ ಘೋಷಣೆ…

ಶಿವಮೊಗ್ಗ,ಆ,6,2019(www.justkannada.in): ಮಹಾರಾಷ್ಟ್ರದಲ್ಲಿ ಭರ್ಜರಿ ಮಳೆ ಪರಿಣಾಮ ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿರುವ ನೀರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಸಿದೆ. ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ ಜಿಲ್ಲೆ ಸೇರಿ ಹಲವು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.

ಈ ನಡುವೆ ಮಲೆನಾಡು ಭಾಗದಲ್ಲೂ ಮಳೆರಾಯನ ಅಬ್ಬರ ಜೋರಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುತ್ತಿದ್ದು ಭಾರಿ ಮಳೆಗೆ ಜನರು ತತ್ತರಿಸಿದ್ದಾರೆ. ಸಾಗರ, ಹೊಸನಗರ, ತೀರ್ಥಹಳ್ಳಿ ತಾಲ್ಲೂಕಿನಾದ್ಯಾಂತ ನಿಲ್ಲದ ಮಳೆರಾಯನ ಆರ್ಭಟ ಜೋರಾಗಿದೆ.

ಶಿವಮೊಗ್ಗದಲ್ಲಿ ಭಾರೀ ಮಳೆ ಹಿನ್ನಲೆ ಇಂದು ಸಾಗರ ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ  ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಹಶಿಲ್ದಾರರೊಂದಿಗೆ ಚರ್ಚಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ಧಾರ ಪ್ರಕಟಿಸಿದ್ದಾರೆ.

Key words: Heavy rain –Shivamogga-Holiday -Declaration -Schools.