ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್​,9,2025 (www.justkannada.in):  ರಾಜ್ಯಾದ್ಯಂತ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಈ ನಡುವೆ ಮಳೆರಾಯನ ಅಬ್ಬರ  ಮುಂದುವರೆದಿದ್ದು ಇಂದಿನಿಂದ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 9ರಿಂದ 13ರ ವರೆಗೆ ಗಾಳಿಯೊಂದಿಗೆ ಭಾರೀ ಮಳೆ ಆಗುವ ಸಾಧ್ಯತೆಯಿದೆ . ಕರಾವಳಿ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.  ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ಇದೆ.

ಶಿವಮೊಗ್ಗ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅದೇ ರೀತಿಯಾಗಿ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: Heavy rain, Five days, state, Meteorological Department