Tuesday, September 22, 2026

BDA Apartments

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ BDA JK_Adv BDA Adv
Home Front Page ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ..

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ..

ಬೆಂಗಳೂರು,ಸೆಪ್ಟಂಬರ್,16,2025 (www.justkannada.in):  ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 16 ಮತ್ತು 17ರಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ . ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Key words: Heavy rain, state, three days