Thursday, August 20, 2026

BDA Apartments

Home Front Page ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನ.29ರವರೆಗೆ ಭಾರಿ ಮಳೆ ಸಾಧ್ಯತೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನ.29ರವರೆಗೆ ಭಾರಿ ಮಳೆ ಸಾಧ್ಯತೆ.

ಬೆಂಗಳೂರು, ನವೆಂಬರ್‌ 23,2023(www.justkannada.in): ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆ ಆಗದಿದ್ದರೂ ಹಿಂಗಾರು ಸ್ವಲ್ಪ ಚುರುಕುಗೊಂಡಿದೆ. ಈ ನಡುವೆ  ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಬುಧವಾರ ಮಳೆಯಾಗಿದ್ದು, ಇಂದು ಸಹ ವರುಣನ ಆಗಮನವಾಗಲಿದೆ. ಇನ್ನು ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು,  ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.

Key words: Heavy rain – state – Bangalore -till -November 29.