ಮುಂದಿನ 5 ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ.

ಬೆಂಗಳೂರು,ಅಕ್ಟೋಬರ್,14,2022(www.justkannada.in): ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು ಕರಾವಳಿ ಬೆಂಗಳೂರಿನಲ್ಲಿ  ಭಾರಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಯಲ್ಲೋ ಅಲರ್ಟ್ ಘೋಷಣೆ  ಮಾಡಲಾಗಿದೆ. ಬೆಂಗಳೂರಿನಲ್ಲಿ 5 ದಿನ ಮಳೆಯಾಗಲಿದೆ. ತಗ್ಗು ಪ್ರದೇಶದ ಜನ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಉತ್ತರಕನ್ನಡ, ದಕ್ಷಿಣಕನ್ನಡ, ಬಾಗಲಕೋಟೆ, ಧಾರವಾಡ ಗದಗ ಹಾವೇರಿ ಬಳ್ಳಾರಿ ಸೇರಿ 17ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಲಿದ್ದು, ಜಿಲ್ಲಾಧಿಕಾರಿಗಳಿಗೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ.

Key words: Heavy rain – state – next -5 days.