Sunday, August 16, 2026

BDA Apartments

Home Front Page ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್,13,2024 (www.justkannada.in): ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಅಬ್ಬರಿಸಿದ್ದ ವರುಣ ಸ್ವಲ್ಪ ದಿನಗಳ ಕಾಲ ಬಿಡುವು ಕೊಟ್ಟಿದ್ದ ಇದೀಗ ಮತ್ತೆ ಮಳೆರಾಯ ಅಬ್ಬರಿಸಲಿದ್ದಾನೆ. ಮುಂದಿನ ನಾಲ್ಕು ದಿನಗಳ ಕಾಲ  ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಆಗಿದ್ದು ರಾಜ್ಯದ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.

Key words: Heavy rain, state, next, four days