Sunday, August 16, 2026

BDA Apartments

Home Front Page ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ.  

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ.  

ಬೆಂಗಳೂರು,ಜುಲೈ,1,2022(www.justkannada.in): ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48ಗಂಟೆಗಳ ಕಾಲ ಕರಾವಳಿ  ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ  ಉಡುಪಿ ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಯೇ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಮಲೆನಾಡಿನ ಭಾಗದಲ್ಲೂ ಮಳೆರಾಯ ಅಬ್ಬರಿಸಲಿದ್ದಾನೆ. ಚಿಕ್ಕಮಗಳೂರು ಹಾಸನ ಕೊಡಗು ಶಿವಮೊಗ್ಗದಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Key words: Heavy rain – state – next- two days.