Sunday, August 16, 2026

BDA Apartments

Home Front Page ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ.

ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ.

ಬೆಂಗಳೂರು,ಸೆಪ್ಟಂಬರ್,5,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಅಬ್ಬರಿಸಿದ ಮಳೆರಾಯ ಅವಾಂತರವನ್ನೇ ಸೃಷ್ಠಿಸಿದ್ದು ನಗರದ ಹಲವು ಬಡಾವಣೆಗಳು ಜಲಾವೃತಗೊಂಡು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ಇದೀಗ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಕುರಿತು ಹವಮಾನ ಇಲಾಖೆ ಮಾಹಿತಿ ನೀಡಿದ್ದು  ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿ ಎರಡು ದಿನ ಯಲ್ಲೋ  ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ 1ರಿಂದ ಸೆಪ್ಟಂಬರ್ 3ರವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.  303 ಮಿ.ಮೀ ಮಳೆಯಾಗಬೇಕಿತ್ತು. ಆದರೆ  643 ಮಿ.ಮೀ ಮಳೆಯಾಗಿದೆ.

Key words: Heavy rain – two -days – Bengaluru.