ಭಾರಿ ಮಳೆ ಹಿನ್ನೆಲೆ: ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ.

ಚಿಕ್ಕಬಳ್ಳಾಪುರ,ನವೆಂಬರ್,18,2021(www.justkannada.in):  ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಆದೇಶ ಹೊರಡಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ  ಎಡೆಬಿಡದೆ ವ್ಯಾಪಕವಾಗಿ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ ವರದಿಯಂತೆ ಇನ್ನೂ ಎರಡು ದಿನಗಳು ಸತತವಾಗಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 19 ಮತ್ತು 20 ರಂದು ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.tukte-hurricane-effect-heavy-rain

ಅಲ್ಲದೆ ಈ ಎರಡು ದಿನಗಳ ರಜಾ ಅವಧಿಯು ಮುಂದೆ ಯಾವುದಾದರೂ ಎರಡು ರಜಾ ದಿನಗಳಂದು ಸರಿದೂಗಿಸಿಕೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Key words:  Heavy rain -Two days -holiday –Chikkaballapur- district -schools