ಭಾರೀ ಮಳೆ ಹಿನ್ನೆಲೆ: ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ

ಮಂಡ್ಯ,ಜುಲೈ,28,2023(www.justkannada.in):  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಈ ನಡುವೆ ಮಲೆನಾಡಿನಲ್ಲಿ ಭಾರಿ ಮಳೆಯಾದ ಹಿನ್ನೆಲೆ, ಕಾವೇರಿ ನದಿಗೆ ಒಳಹರಿವು ಹೆಚ್ಚಾಗಿದ್ದು, ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ.

ಕೆಆರ್​ಎಸ್ ಡ್ಯಾಂನಲ್ಲಿ ಪ್ರಸ್ತುತ ನೀರಿನ ಮಟ್ಟ ಮಟ್ಟ 110.82 ಅಡಿ ಇದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು,  ಕೆಆರ್ ಎಸ್ ಜಲಾಶಯಕ್ಕೆ 33,566 ಕ್ಯೂಸೆಕ್ ನೀರು ಒಳಹರಿವು, 3071 ಕ್ಯೂಸೆಕ್ ನೀರು ಹೊರ ಹೋಗುತ್ತಿದೆ.

Key words: Heavy rain – Water- level -rise – KRS reservoir