ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ ಕರ್ನಾಟಕ, ಕೇರಳಾದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ನವೆಂಬರ್ 2021 (www.justkannada.in): ರಾಜ್ಯದಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಕೆಲ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನು ಕೇರಳಾದಲ್ಲೂ ಭಾರಿ ಮಳೆ ಆತಂಕದ ಹಿನ್ನೆಲೆಯಲ್ಲಿ ಸರಕಾರ ಕೆಲ ಕ್ರಮಗಳನ್ನು ಕೈಗೊಂಡಿದೆ.

ಇಡುಕ್ಕಿ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಲಪ್ಪುಳ, ಕಣ್ಣೂರು ಮತ್ತು ಕಾಸರಗೋಡು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ನಾಳೆ ಬಂಗಾಳಕೊಲ್ಲಿಯಲ್ಲಿ ಹೊಸದಾಗಿ ಕಡಿಮೆ ಒತ್ತಡ ನಿರ್ಮಾಣವಾಗುವ ಸಾಧ್ಯತೆ ಇದೆ. ಇನ್ನು 48 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ತೀವ್ರಗೊಂಡು ಭಾರತದ ಕರಾವಳಿಯತ್ತ ಚಲಿಸುವ ಸಾಧ್ಯತೆ ಇದೆ.

ಚಂಡಮಾರುತ ಅರಬ್ಬಿ ಸಮುದ್ರ ಸೇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಹೊಸ ಕಡಿಮೆ ಒತ್ತಡದ ಪ್ರದೇಶವು ಸೋಮವಾರದ ವೇಳೆಗೆ ಕೊಮರಿನ್ ಪ್ರದೇಶದಲ್ಲಿ ಮತ್ತು ಶ್ರೀಲಂಕಾ ಕರಾವಳಿಯ ಬಳಿ ಭೂಕುಸಿತ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.