ಬೆಂಗಳೂರು,ಮೇ,19,2025 (www.justkannada.in): ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾವೇರಿ, ಬಳ್ಳಾರಿ , ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ ಕೊಪ್ಪಳ ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಅತೀ ಹೆಚ್ಚು ಮಳೆ ಅಂದರೆ ಗರಿಷ್ಠ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಬರುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಮೇ 21ರವರೆಗೆ ಕರಾವಳಿ ಈ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಿದೆ.
Key words: Heavy rains, across, state: Orange, yellow alert