Monday, September 28, 2026

BDA Apartments

ಇನ್ನು ಮೂರು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ BDA JK_Adv BDA Adv
Home Front Page ಇನ್ನು ಮೂರು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಇನ್ನು ಮೂರು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 24, 2020 (www.justkannada.in): ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ.

ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಮತ್ತೆ ಚುರುಕಾಗಿದ್ದು, ಚದುರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಇದು ಇನ್ನು ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಹತ್ವದ ಸೂಚನೆ ನೀಡಿದೆ.

ಇಂದು ಬೆಳಗ್ಗೆ ಬೆಂಗಳೂರು, ರಾಮನಗರ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಗಾಳಿ ಸಹಿತ ಮಳೆಯಾಗಿದೆ.

ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೂ ಟ್ರಪ್ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.