ಬೆಂಗಳೂರು ನಗರದ ಹಲವೆಡೆ  ಜಿಟಿ ಜಿಟಿ ಮಳೆ: ಕಾಂಗ್ರೆಸ್, ಬಿಜೆಪಿ ಪ್ರತಿಭಟನೆಗೆ ಅಡ್ಡಿ..

ಬೆಂಗಳೂರು,ಜೂನ್,20,2023(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ  ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಗರದ ಮೆಜೆಸ್ಟಿಕ್​​, ವಿಧಾನಸೌಧ, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಶಿವಾಜಿನಗರ, ಕೆ.ಆರ್.ಮಾರ್ಕೆಟ್​, ಜಯನಗರ, ಶಿವಾನಂದ ಸರ್ಕಲ್​, ಮೇಖ್ರಿ ಸರ್ಕಲ್, ರಾಜಾಜಿನಗರ, ಮೈಸೂರು ರಸ್ತೆ, ಮಾಗಡಿ ರಸ್ತೆ, ವಿಜಯನಗರ, ಯಶವಂತಪುರ, ಚಂದ್ರಾಲೇಔಟ್, ನಂದಿನಿ ಲೇಔಟ್​, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಹೆಬ್ಬಾಳ, ಯಲಹಂಕ, ಶ್ರೀನಗರ, ಆರ್.ಟಿ.ನಗರ ಸೇರಿ ಹಲವೆಡೆ ಮಳೆಯಾಗುತ್ತಿದೆ.

ಮಳೆಯಿಂದಾಗಿ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರಿ ಮಳೆಗೆ ನದಿಯಂತಾಗಿರುವ ಬೆಂಗಳೂರಿನ ಪ್ರಮುಖ ರಸ್ತೆಗಳಿಂದ ಹಲವೆಡೆ ಟ್ರಾಫಿಕ್ ಜಾಮ್​ ಉಂಟಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯಕ್ಕೆ ನೀಡುತ್ತಿದ್ದ ಅಕ್ಕಿಯನ್ನ ನಿಲ್ಲಿಸಿದ ಹಿನ್ನಲೆ ಇಂದು ಬೆಳಿಗ್ಗೆ 11ಗಂಟೆಗೆ ಕಾಂಗ್ರೆಸ್​ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಇದೀಗ ಮಳೆ ಅಡ್ಡಿಯಾಗಿದೆ. ಹಾಗೆಯೇ ಬಿಜೆಪಿ ಪ್ರತಿಭಟನೆಗೂ ಕೂಡ ವರುಣ ಅಡ್ಡಿಪಡಿಸಿದ್ದಾನೆ.

Key words:  Heavy- rains – Bengaluru -city