ಮೈಸೂರು ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ: ಮನೆ ಕುಸಿತ

ಮೈಸೂರು,ಆ,8,2019(www.justkannada.in): ಮೈಸೂರು ಜಿಲ್ಲೆಯಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದ್ದು ಮಳೆರಾಯನ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಹೆಚ್.ಡಿ.ಕೋಟೆಯ ಹ್ಯಾಂಡ್ ಪೋಸ್ಟ್‌ನ ಯರಹಳ್ಳಿಯಲ್ಲಿ  ಮನೆ ಕುಸಿದು ಬಿದ್ದಿದೆ. ಈ ವೇಳೆ ಕುಟುಂಬದವರು ಅಪಾಯದಿಂದ ಪಾರಾಗಿದ್ದು, ಅಲ್ಲಿದ್ದ ಪದಾರ್ಥಗಳು ಹಾನಿಯಾಗಿದೆ.ಯರಗನಹಳ್ಳಿಯ ವಿಜಯಕುಮಾರ್ ಎಂಬುವರಿಗೆ ಸೇರಿದ ಮನೆ ಕುಸಿದಿದ್ದು , ಮನೆ ಕುಸಿತದಿಂದ ಕುಟುಂಬದವರು ಆತಂಕಕ್ಕೊಳಗಾಗಿದ್ದಾರೆ.

ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ಮುಂದುವರೆದ ಮಳೆಯ ಆರ್ಭಟ ಮುಂದುವರಿದ ಪರಿಣಾಮ 2ನೇ ದಿನವೂ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Key words: Heavy rains – Mysore- district- collapse – house