ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ..

ಬೆಂಗಳೂರು,ಮೇ,8,2023(www.justkannada.in): ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ.  ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನಾಳೆ ನಾಡಿದ್ದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಇಂದು ಮೇ 11 ರಂದು ದಕ್ಷಿಣ ಒಳನಾಡಿನಲ್ಲಿ ಯಲ್ಲೋ ಅಲರ್ಟ್  ಮೇ 10 ರಂದು ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್  ಘೋಷಿಸಲಾಗಿದೆ ಎಂದು ಹವಮಾನ ತಜ್ಞ ಪ್ರಸಾದ್ ತಿಳಿಸಿದ್ದಾರೆ. ಇಂದು ಪಶ್ಚಿಮ ಘಟ್ಟ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಹಾಗೂ ಮೇ 10ರಂದು ಪಶ್ಚಿಮ ಘಟ್ಟ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಿಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ಬೆಂಗಳೂರು ನಗರದ ಶಾಂತಿನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಜೆಯಿಂದಲೇ ಮಳೆ ಸುರಿಯಲು ಶುರುವಾಗಿದೆ. ಸದ್ಯ ನಗದ ವಿವಿಧ ಕಡೆಗಳಲ್ಲಿ ಮೋಡಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಲಕ್ಷಣಗಳು ಕಾಣುತ್ತಿವೆ. ಮಳೆ ಹೆಚ್ಚಾದರೆ ರಸ್ತೆಗಳಲ್ಲಿ ನೀರು ತುಂಬಿ ಕರೆಯಂತಾಗಲಿದ್ದು, ವಾಹನ ಸವಾರರ ಸಂಚಾರಕ್ಕೆ ತೊಂದರೆಯಾಗಲಿದೆ.

Key words: Heavy rains – state – next -five days.