ರಾಜ್ಯದ ಹಲವೆಡೆ ಭಾರಿ ಮಳೆ: ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ…

ಕೊಡಗು/ಬೆಳಗಾವಿ,ಆ,5,2020(www.justkannada.in):  ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕೊಡಗು ಜಿಲ್ಲೆ ಸೇರಿ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.jk-logo-justkannada-logo

ಮೈಸೂರು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ,ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಹಲವಡೆ ವರುಣನ ಆರ್ಭಟ ಜೋರಾಗಿದೆ.  ದಕ್ಷಿಣ ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು,  ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಭಾಗಮಂಡಲ- ಮಡಿಕೇರಿ, ಭಾಗಮಂಡಲ ನಾಪೋಕ್ಲು ಸಂಪರ್ಕ ಕಡಿತವಾಗಿದ್ದು ಭಾರಿ ಮಳೆ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಡುಪಿಯಲ್ಲೂ ಮಳೆರಾಯನ ಅಬ್ಬರ ಜೋರಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಸುರಿಯುತ್ತಿದ್ದು,  ಸುಳ್ಯದಲ್ಲಿರುವ ಕುಕ್ಕೆಸುಬ್ರಮಣ್ಯ ಸ್ನಾನಘಟ್ಟ ಮುಳುಗಡೆಯಾಗಿದೆ.heavy-rains-state-red-alert-declaration-districts-kodagu

ಬೆಳಗಾವಿಯಲ್ಲೂ ವರುಣನ ಆರ್ಭಟ ಮುಂದುವರೆದಿದ್ದು ಬೆಳಗಾವಿ- ಯಳ್ಳೂರ ರಸ್ತೆ ಪಕ್ಕದಲ್ಲಿರುವ ಬೆಳಗಾವಿಯಲ್ಲಿ ನೂರಾರು ಎಕರೆ ಜಮೀನು ಜಲಾವೃತವಾಗಿದೆ. ಮಳೆಯಿಂದಾಗಿ ನಿಪ್ಪಾಣಿಯ ಕೆಎಲ್ ಇ ಕಾಲೇಜಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ಅಕ್ಕೊಳ-ಸಿದ್ಧನಾಳ ಸೇತುವೆ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಚಿಕ್ಕೋಡಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಇನ್ನು ಧಾರವಾಡದಲ್ಲೂ ಎರಡು ದಿನದಿಂದ ಮಳೆಯಾಗುತ್ತಿದೆ.

Key words: Heavy rains –state-Red Alert -Declaration -districts – Kodagu.