Monday, October 19, 2026

Dasara Wishes

Happy Dasara
Home Front Page ಮೈಸೂರಿನಲ್ಲಿ ಹೆಲಿಟೂರಿಸಂ ಪ್ರಸ್ತಾವ ವಿಚಾರ‌: ಸಚಿವ ಸಿ‌.ಪಿ.ಯೋಗೀಶ್ವರ್‌ ಗೆ ಸಂಸದ ಪ್ರತಾಪ್‌ ಸಿಂಹ ಟಾಂಗ್…

ಮೈಸೂರಿನಲ್ಲಿ ಹೆಲಿಟೂರಿಸಂ ಪ್ರಸ್ತಾವ ವಿಚಾರ‌: ಸಚಿವ ಸಿ‌.ಪಿ.ಯೋಗೀಶ್ವರ್‌ ಗೆ ಸಂಸದ ಪ್ರತಾಪ್‌ ಸಿಂಹ ಟಾಂಗ್…

ಮೈಸೂರು,ಏಪ್ರಿಲ್,12,2021(www.justkannada.in): ಮೈಸೂರಿನಲ್ಲಿ ಹೆಲಿಟೂರಿಸಂಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದು ಈ ಸಂಬಂಧ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಗೆ ಟಾಂಗ್ ನೀಡಿದ್ದಾರೆ.Sanskrit Vivia,8th event,30 people,Ph.D,43graduates,M.Phil,Awarded 

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಪ್ರವಾಸೋದ್ಯಮ ಇಲಾಖೆಯವರು ಬಣ್ಣ ಬಣ್ಣದ ಕಾಗೆ ಹಾರಿಸಬಾರದು. ಮಂಡ್ಯದಲ್ಲಿ ಡಿಸ್ನಿಲ್ಯಾಂಡ್, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡ್ತೀವಿ ಅಂತಾರೆ.  ಇಂಥವೆಲ್ಲ ನಾವೂ ತುಂಬಾ ನೋಡಿದ್ದೇವೆ. ಎರಡು ಸಲ ಪ್ರಚಾರಕ್ಕೆ ಅಂತ ಮಾತಾಡ್ತಾರೆ. ಎರಡು ವರ್ಷ ಆದ್ಮೇಲೆ ಸಚಿವರು ಬದಲಾಗುತ್ತಾರೆ.  ಆ ಮೇಲೆ ಎಲ್ಲವೂ ಮರೆತು ಹೋಗುತ್ತೆ.  ಹೆಲಿ ಟೂರಿಸಂ ಅನ್ನುವ ಪದ ಮಾತ್ರ ಕೇಳಿದ್ದೇವೆ. ಆ ಯೋಜನೆ ರೂಪುರೇಷೆ ಏನು ? ನಿಮ್ಮ ಬಳಿ ವಿಷನ್ ಡಾಕ್ಯುಮೆಂಟ್ ಎಲ್ಲಿದೆ ? ಯಾವ ಘನಕಾರ್ಯ ಮಾಡ್ತೀರಿ ಅಂತ ನಮಗೂ ಹೇಳಿ ಎಂದು ಪ್ರಶ್ನಿಸಿದ್ದಾರೆ.

ಹೆಲಿಕಾಪ್ಟರ್ ಹಾರಿಸಬೇಕು ಅನ್ನಿಸಿದರೆ ಬನ್ನಿ ವಿಮಾನ ನಿಲ್ದಾಣದಲ್ಲಿ ನಾವೇ ಜಾಗ ಕೊಡುತ್ತೇವೆ…

ಮೈಸೂರಿನಿಂದ ಕಾರವಾರ, ಬಳ್ಳಾರಿ, ಬೆಂಗಳೂರಿಗೆ ಹೆಲಿಕಾಪ್ಟರ್ ಸೇವೆ ಶುರು ಮಾಡುತ್ತೇವೆ ಅಂತೀರಿ. ಮೈಸೂರಿನಿಂದ ಕಾರವಾರಕ್ಕೆ ಹೋಗಿ ನೋಡುವುದು ಏನಿದೆ ?ದಸರಾ ಸಂದರ್ಭದಲ್ಲಿ ಮಾಡುವ ಹೆಲಿರೈಡ್‌ ಗೆ ಜನರು ಬರೋದಿಲ್ಲ. ಯೋಜನೆ ರೂಪಿಸುವ ಮುನ್ನ ಇದೆಲ್ಲವನ್ನೂ ಗಮನಿಸಬೇಕು. ಇಷ್ಟಾಗಿಯೂ ನಿಮಗೆ ಹೆಲಿಕಾಪ್ಟರ್ ಹಾರಿಸಬೇಕು ಅನ್ನಿಸಿದರೆ ಬನ್ನಿ ವಿಮಾನ ನಿಲ್ದಾಣದಲ್ಲಿ ನಾವೇ ಜಾಗ ಕೊಡುತ್ತೇವೆ.  ಕೇವಲ 10 ಮೀಟರ್ ದೂರದಲ್ಲಿ ರಾಜವಂಶಸ್ಥರಿಗೆ ಸೇರಿದ ಹೆಲಿಪ್ಯಾಡ್ ಇದೆ. ಅದನ್ನು ಬಾಡಿಗೆ, ಬೋಗ್ಯಕ್ಕೆ ಕೇಳಿದ್ರೆ ಕೊಡಲ್ಲ ಅಂತಾರಾ ? ಎಂದು ಚಾಟಿ ಬೀಸಿದರು.Helitourism -proposal – Mysore-MP-Pratap Sinha-Tong- Minister- CP Yogeshwar.

ಹೆಲಿ ಟೂರಿಸಂ‌ಗೆ ನನ್ನ ವಿರೋಧ ಇದೆ. ಈ ಸಂಬಂಧ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತನಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Key words: Helitourism -proposal – Mysore-MP-Pratap Sinha-Tong- Minister- CP Yogeshwar.