ಬಿಡಿಎ ಕೇಂದ್ರ ಕಚೇರಿಯ ಆವರಣದಲ್ಲಿ ‘ಸಹಾಯ ಕೇಂದ್ರ’ ಆರಂಭ.

ಬೆಂಗಳೂರು,ಆಗಸ್ಟ್,24,2021(www.justkannada.in): ಡಾ. ಕೆ. ಶಿವರಾಮಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯವು ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿಯಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ಕಚೇರಿಯ ಆವರಣದಲ್ಲಿ (ಗಾಜಿನ ಮನೆ) “ಸಹಾಯ ಕೇಂದ್ರ”ವನ್ನು ಪ್ರಾರಂಭಿಸಲಾಗಿದೆ.

ದಿನಾಂಕ 03.08.2018ಕ್ಕೆ ಮುಂಚಿತವಾಗಿ ನಿರ್ಮಿಸಲಾದ ಕಟ್ಟಡ ಮತ್ತು ಮನೆಗಳ ಬಗ್ಗೆ ವರದಿಯನ್ನು ನೀಡಲು ರಚಿಸಿರುವ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿಯು ಬಡಾವಣೆಯ ಅಧಿಸೂಚಿತ ಪ್ರದೇಶಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು ದಾಖಲೆಗಳನ್ನು ಸಂಗ್ರಹಿಸುತ್ತಿದೆ.

ಈಗ ಪ್ರಾಧಿಕಾರದ ಕೇಂದ್ರ ಕಚೇರಿಯ ಆವರಣದಲ್ಲಿ ಸಹಾಯ ಕೇಂದ್ರವನ್ನು ಪ್ರಾರಂಭಿಸಿದ್ದು, ಈ ಸಹಾಯ ಕೇಂದ್ರವು 25.08.2021 ರಿಂದ 09.09.2021ರವರೆಗೆ ಕಾರ್ಯನಿರ್ವಹಿಸಲಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಸಲ್ಲಿಸಬಹುದಾಗಿರುತ್ತದೆ.ಈ ವ್ಯವಸ್ಥೆಯನ್ನು ಭೂಮಾಲೀಕರು / ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಸಮಿತಿಯು ತಿಳಿಸಿದೆ.

Key words: Help Center-open- BDA- headquarters.