ಬೆಂಗಳೂರು,ನವೆಂಬರ್,11,2025 (www.justkannada.in): ದೆಹಲಿಯ ಕೆಂಪುಕೋಟೆ ಬಳಿ ಕಾರು ಭೀಕರಸ್ಪೋಟ ಪ್ರಕರಣ ಸಂಬಂಧ ಇದೀಗ ರಾಜ್ಯದ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬಳ್ಳಾರಿಯಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು ಏರ್ ಪೋರ್ಟ್ ಬರುವ ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಏರ್ ಪೋರ್ಟ್ ನಲ್ಲಿ ಹೆಚ್ಚುವರಿಯಾಗಿ ಶಸ್ತ್ರ ಸಜ್ಜಿತ ಸಿಐಎಸ್ ಎಫ್ ನಿಯೋಜನೆ ಮಾಡಲಾಗಿದೆ.
ಏರ್ ಪೋರ್ಟ್ ಗೆ ಬರುವ ಪ್ರಯಾಣಿಕರು ಸಿಬ್ಬಂದಿಗಳನ್ನ ತಪಾಸಣೆಗೊಳಪಡಿಸಲಾಗುತ್ತಿದ್ದು ಪಾರ್ಕಿಂಗ್ ಏರಿಯಾ ಸೇರಿ ಎಲ್ಲಡೆ ಅಲರ್ಟ್ ಆಗಿರಲು ಸೂಚಿಸಲಾಗಿದೆ ಏರ್ ಪೋರ್ಟ್ ಭದ್ರತಾ ಪಡೆ ಜೊತೆ ಪೊಲೀಸರಿಂದಲೂ ಭದ್ರತೆ ವಹಿಸಲಾಗಿದೆ.
Key words: Massive, car explosion, Delhi, High alert, Bengaluru







