Sunday, August 23, 2026

BDA Apartments

Home Front Page ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಬಿ.ವೈ ವಿಜಯೇಂದ್ರ

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಬಿ.ವೈ ವಿಜಯೇಂದ್ರ

ತುಮಕೂರು, ಫೆಬ್ರುವರಿ 2,2024(www.justkannada.in):  ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರೇ ತೀರ್ಮಾನಿಸುತ್ತಾರೆ. ಅಭ್ಯರ್ಥಿಗಳ ಹೆಸರನ್ನ ಪಕ್ಷದ ಹೈಕಮಾಂಡ್ ಅಂತಿಮಗೊಳಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌  ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ರಾಜ್ಯದ 28 ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕೆಂದು ಕಾರ್ಯಕರ್ತರ ಅಭಿಪ್ರಾಯ ಪಡೆದು ಕಳುಹಿಸಲಾಗುತ್ತದೆ. ನಂತರ ಹೈಕಮಾಂಡ್ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಿದೆ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಿಂದ  ಮಾಜಿ ಸಚಿವ ವಿ.ಸೋಮಣ್ಣ  ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ,  ಕೇಂದ್ರದ ವರಿಷ್ಠರು ಒಪ್ಪಿಗೆ ಸೂಚಿಸಿದರೆ ನಮ್ಮದೇನು ಅಭ್ಯಂತರ ಇಲ್ಲ. ಸೋಮಣ್ಣ ಎಲ್ಲರಿಗಿಂತ ಹಿರಿಯರಿದ್ದಾರೆ. ಪಕ್ಷ ಒಗ್ಗಟ್ಟಾಗಿ ಎಲ್ಲಾ ತೀರ್ಮಾನ ಮಾಡುತ್ತದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಸೋಮಣ್ಣ ಸ್ಪರ್ಧಿಸುವುದಕ್ಕೆ ಯಾರ ವಿರೋಧವೂ ಇಲ್ಲ ಎಂದರು.

Key words: High Command- decision – selection – candidates – LokSabha -elections-BY Vijayendra