ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಪರಿಶೀಲನೆ, ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್, 6,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ 279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ  ತಕರಾರು ಅರ್ಜಿ ವಿಚಾರಣೆ ನಡೆಸಿದ  ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಪೀಠವು, ಶೃಂಗೇರಿ ವಿಧಾನಸಭಾ ಕ್ಷೇತ್ರದ  279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿದ್ದು, 2 ವಾರದಲ್ಲಿ ಮರುಪರಿಶೀಲನೆ ನಡೆಸಿ  ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿದೆ.

ಈ ನಡುವೆ ಇದೇ ವೇಳೆ ಆದೇಶಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಪರ ವಕೀಲರು ಮನವಿ ಮಾಡಿದರು. ಸುಪ್ರೀಂಕೋರ್ಟ್ ​ಗೆ ಮೇಲ್ಮನವಿ ಸಲ್ಲಿಸಬೇಕಿರುವ ಕಾರಣಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಆದರೆ, ಇನ್ನೊಂದೆಡೆ ಡಿ.ಎನ್.ಜೀವರಾಜ್ ಪರ ವಕೀಲೆ ವಂದನಾ.ಪಿ.ಎಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಎರಡು ಕಡೆಯ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಅಂತಿಮವಾಗಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ತನ್ನದೇ ತೀರ್ಪಿಗೆ 2 ವಾರ ಮಧ್ಯಂತರ ತಡೆ ನೀಡಿದೆ.

Key words: High Court, orders, re-verification, Sringeri, assembly constituency