ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪನೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು,ಮೇ,28,2025 (www.justkannada.in):  ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ರೈತರ ಆಹಾರ ಧಾನ್ಯ ಖರೀದಿಸಲು ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರೈತ ಸೇನೆ ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.vtu

ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲ್ಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸಬೇಕು. ನಿಗದಿತ ಅವಧಿಗಿಂತ ಕನಿಷ್ಠ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.

Key words: High Court, Minimum, Support Price, Center, taluk