Saturday, August 8, 2026

BDA Apartments

Home Cinema ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಂಜೆಗೆ ಮುಂದೂಡಿಕೆ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಂಜೆಗೆ ಮುಂದೂಡಿಕೆ

ಬೆಂಗಳೂರು,ನವೆಂಬರ್,26,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸಂಜೆ 4 ಗಂಟೆಗೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಇಂದು ಹೈಕೋರ್ಟ್ ನ್ಯಾಯಮೂರ್ತಿ ನ್ಯಾ ವಿಶ್ವಜಿತ್ ಪೀಠದಲ್ಲಿ ನಟ ದರ್ಶ‍ನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಸುದೀರ್ಘವಾಗಿ ವಾದ ಆಲಿಸಿದ ನ್ಯಾ ಎಸ್ ವಿಶ್ವಜಿತ್ ಅವರಿದ್ದ ಪೀಠ ಇಂದು ಸಂಜೆ 4 ಗಂಟೆಗೆ ವಿಚಾರಣೆ ಮುಂದೂಡಿದೆ.

ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿತ್ತು.

Keyw words:  bail application, High court, Actor, Darshan ,