Saturday, August 8, 2026

BDA Apartments

Home Cinema ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿದ ಹೈಕೋರ್ಟ್

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು,ಅಕ್ಟೋಬರ್,22,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿದೆ.

ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ನಡೆಯಿತು. ಈ ವೇಳೆ ನಟ ದರ್ಶನ್ ಪರ ವಾದ ಮಂಡಿಸಿದ ವಕೀಲ ಸಿವಿ ನಾಗೇಶ್, ನಟ ದರ್ಶನ್ ಗೆ ಬೆನ್ನು ಹುರಿ ನೋವಿದೆ.  ದರ್ಶನ್ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ. ದರ್ಶನ್ ಗೆ ಬೆನ್ನು ಹುರಿಯ ಸರ್ಜರಿ ಮಾಡಬೇಕೆಂದು ಹೇಳಲಾಗಿದೆ. ಹೀಗಾಗಿ ಅನಾರೋಗ್ಯ ಕಾರಣಕ್ಕೂ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಜೈಲು ಅಧಿಕಾರಿಗಳಿಂದ ವೈದ್ಯಕೀಯ ವರದಿ ಕೇಳಿದ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿತು.

Key words: High Court, adjourned, actor, Darshan, bail application