Thursday, August 6, 2026

BDA Apartments

Home Front Page ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ, ಮೆರವಣಿಗೆ ನಡೆಸುವುದಕ್ಕೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ.

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ, ಮೆರವಣಿಗೆ ನಡೆಸುವುದಕ್ಕೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ.

ಬೆಂಗಳೂರು,ಆ,1,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಡೆಸುವುದಕ್ಕೆ  ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಿರ್ಬಂಧ  ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ​ನ್ನು ಇತ್ಯರ್ಥಪಡಿಸಿದ್ದು,  ನಿಯಮ ಜಾರಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದೆ.  ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಮುಂದುವರಿಸಬೇಕು. ಪ್ರತಿಭಟನೆ, ಮೆರವಣಿಗೆಗೆ ಫ್ರೀಡಂ ಪಾರ್ಕ್​​ನಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

ಹೈಕೋರ್ಟ್ ಆದೇಶದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರದ ಹೇಳಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಯಮ ರೂಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 27 ಎಫ್ ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

Key words: High Court- ban-protests – Bengaluru.