Saturday, August 15, 2026

BDA Apartments

Home Front Page BREAKING NEWS: ಮೈಸೂರು ವಿವಿ ಕುಲಪತಿ ನೇಮಕಕ್ಕೆ ಹೈಕೋರ್ಟ್ ತಡೆ

BREAKING NEWS: ಮೈಸೂರು ವಿವಿ ಕುಲಪತಿ ನೇಮಕಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಜೂನ್ 21, 2023 (www.justkannada.in): ಮೈಸೂರು ವಿವಿ ಕುಲಪತಿಯಾಗಿ ಪ್ರೊ. ಎನ್.ಕೆ.ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೇಮಕ ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಅವರು ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದರು.

ಪ್ರೊ. ಶರತ್ ಅವರು ಯು.ಆರ್.ಅನಂತಮೂರ್ತಿ ಪುತ್ರ. ನಿಯಮಾವಳಿ ಉಲ್ಲಂಘಿಸಿ ಕುಲಪತಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಪ್ರಕರಣ ಇರುವವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಪ್ರೊ. ಎನ್.ಕೆ.ಲೋಕನಾಥ್ ಅವರಿಗೆ ಅರ್ಹತೆ ಇಲ್ಲದಿದ್ದರೂ ನೇಮಕಾತಿ ಮಾಡಲಾಗಿದೆ ಎಂದು ಪ್ರೊ. ಶರತ್ ಆರೋಪಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದ್ದರು.