ಕಾಲ್ತುಳಿತ ಕೇಸ್: ನ್ಯಾ. ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು, ಜುಲೈ,25,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್  ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ಕರ್ನಾಟಕ ಸಚಿವ  ಸಂಪುಟ ಅಂಗೀಕರಿಸಿದ ಬೆನ್ನಲ್ಲೇ ಮೈಕೆಲ್ ಕುನ್ಹಾ ವರದಿಯನ್ನು ರದ್ದುಪಡಿಸುವಂತೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆಗೆ ಮನವಿ ಮಾಡಿತು. ಆದರೆ ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 28ಕ್ಕೆ ನಿಗದಿಪಡಿಸಿದೆ.

ಸರ್ಕಾರ ತನ್ನ ಮುಖ ಉಳಿಸಿಕೊಳ್ಳಲು ಆಯೋಗ ರಚಿಸಿದಂತಿದೆ. ನ್ಯಾ.ಕುನ್ಹಾ ಆಯೋಗದ ವರದಿ ಏಕಪಕ್ಷೀಯವಾಗಿದೆ. ಸಾಕ್ಷಿಗಳ ಪಾಟೀಸವಾಲಿಗೆ ಅವಕಾಶ ನೀಡಲಾಗಿಲ್ಲ. ಅರ್ಜಿದಾರರ ವರ್ಚಸ್ಸಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಪೂರ್ವಯೋಜಿತವಾಗಿಯೇ ವರದಿ ಲೀಕ್ ಮಾಡಲಾಗಿದೆ. ಹೀಗಾಗಿ ವರದಿಯನ್ನೇ ರದ್ದುಪಡಿಸಬೇಕು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.vtu

Key words: Stampede case, Petition, High Court, quashing, Justice Cunha’s report