ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಬೆಂಗಳೂರು,ಆಗಸ್ಟ್,30,2022(www.justkannada.in): ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿ ಸದನ ಸಮಿತಿ ರಚನೆ ಪ್ರಶ್ನಿಸಿ  ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ  ವಿಚಾರಣೆ ನಡೆಸಿದ ಹೈಕೋರ್ಟ್, ಗಣೇಶ ಕೂರಿಸುವ ಬಗ್ಗೆ ನಿರ್ಧರಿಸುವ ಅಧಿಕಾರವನ್ನು ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಿ ​ ಆದೇಶಿದೆ.

ಮೈದಾನದಲ್ಲಿ ಗಣೇಶ ಕೂರಿಸುವುದು ಈಗ ಪಾಲಿಕೆ ಆಯುಕ್ತರಿಗೆ ಬಿಟ್ಟ ವಿಚಾರ. ಗಣೇಶೋತ್ಸವಕ್ಕೆ‌ ಬರುವ ಅರ್ಜಿ ನಿರ್ಧರಿಸುವ ಅಧಿಕಾರವನ್ನು ‌ಹೈಕೋರ್ಟ್ ಕಮಿಷನರ್​ ಗೆ ನೀಡಿ ಆದೇಶಿಸಿದೆ. ಇದರಿಂದ ಈದ್ಗಾ ಗಣೇಶ ವಿವಾದ ಮತ್ತೆ ಗೊಂದಲಕ್ಕೆ ಬಿದ್ದಿದೆ.

Key words: High Court -green signal – Ganeshotsav -Eidga Maidan – Hubli.