ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್

ಬೆಂಗಳೂರು ,ಜುಲೈ,12,2021(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು,  ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ಧು ಕೋರಿ ಸಲ್ಲಿಸಿದ್ಧ ಅರ್ಜಿ ವಜಾ.ಗೊಳಿಸಿದೆ.jk

 ಕೊರೋನಾ ಸೋಂಕಿನ ಮಧ್ಯೆಯೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಜುಲೈ.19 ಹಾಗೂ 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು.

 ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ 1.48ಕ್ಕೆ ಇಳಿಕೆ ಕಂಡಿದೆ. ಕೋವಿಡ್ 2ನೇ ಅಲೆಯು ಕಡಿಮೆಗೊಂಡಿದೆ. ಹೀಗಾಗಿ ಕೊರೋನಾ ಸೋಂಕಿನ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ, ನಿಗದಿ ಪಡಿಸಿರುವಂತೆಯೇ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದೆ. ಜುಲೈ.19 ಹಾಗೂ 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ನಿಗದಿಯಂತೆ ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಬಹು ಆಯ್ಕೆ ಮಾದರಿಯಂತೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತಿದೆ. ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಿರುವ ಕಾರಣದಿಂದಾಗಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೈಕೋರ್ಟ್ ನ್ಯಾಯಪೀಠಕ್ಕೆ ಸರ್ಕಾರ ಮನವಿ ಮಾಡಿತು.

ನ್ಯಾಯಮೂರ್ತಿ ನಾಗರತ್ನ ಹಾಗೂ ನ್ಯಾಮೂರ್ತಿ ಸಂಜೀವ್ ಕುಮಾರ್ ದ್ವಿಸದಸ್ಯ ಪೀಠವು, ಒತ್ತಾಯದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಬಾರದು. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪರೀಕ್ಷೆ ನಡೆಸುವುದು ಸೂಕ್ತ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಾಜ್ಯ ಸರ್ಕಾರ ರೂಪಿಸಿರುವಂತ ಎಸ್ ಓಪಿ ಕ್ರಮಗಳನ್ನು ಪಾಲಿಸಬೇಕು ಎಂದು ಅಭಿಪ್ರಾಯ ಪಟ್ಟು, ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

Key words: High court-green signal -SSLC -examination